ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಶನಿವಾರ ಬೀಗ ಹಾಕಿದರು.
ಬಿಬಿಎಂಪಿಗೆ ಐದು ವರ್ಷಗಳಿಂದ ₹ 40 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟರ್ಫ್ ಕ್ಲಬ್: ₹ 5.15 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರು ಟರ್ಫ್ ಕ್ಲಬ್‌ಗೂ ಬೀಗ ಹಾಕಲು ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸಿದರು. ಹೈಕೋರ್ಟ್‌ನಿಂದ ತಂದಿರುವ ಮಧ್ಯಂತರ ತಡೆಯಾಜ್ಞೆಯನ್ನು ಟರ್ಫ್ ಕ್ಲಬ್‌ನವರು ತೋರಿಸಿದ್ದರಿಂದ ಬಿಬಿಎಂಪಿ ಅಧಿಕಾರಿಗಳು ವಾಪಸ್ ಆದರು.
ಫೆಬ್ರುವರಿಯಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಟರ್ಪ್ ಕ್ಲಬ್ ಅಧ್ಯಕ್ಷ ಅರವಿಂದ್ ರಾಘವನ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.