ಬೆಂಗಳೂರು: ಮೆಟ್ರೊ ನೇರಳೆ ಮಾರ್ಗದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದೆ ಎಂದು ನಮ್ಮ ಮೆಟ್ರೊ ಹೇಳಿದೆ.
ಬೈಯಪ್ಪನಹಳ್ಳಿಯಿಂದ ಗರುಡಾಚಾರ್‌ಪಾಳ್ಯ ನಡುವೆ ಉಂಟಾದ ತಾಂತ್ರಿಕ ದೋಷದಿಂದಾಗಿ ರೈಲು ಸಂಚಾರ ನಿಧಾನವಾಗಿತ್ತು. ಪರಿಣಾಮ ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಗಿತ್ತು.
ಈ ಬಗ್ಗೆ ಎಕ್ಸ್‌ನಲ್ಲಿ, ‘ನೇರಳೆ ಮಾರ್ಗದಲ್ಲಿ ತಾಂತ್ರಿಕ ಅಡಚಣೆಯನ್ನು ಬೆಳಿಗ್ಗೆ 9.20ಕ್ಕೆ ಸರಿಪಡಿಸಲಾಗಿದ್ದು, ರೈಲುಗಳು ವೇಳಾಪಟ್ಟಿಯ ವೇಗದಲ್ಲಿ ಚಲಿಸುತ್ತಿವೆ. ಕ್ಯಾಸ್ಕೇಡಿಂಗ್ ಪರಿಣಾಮಗಳನ್ನು ಸಾಮಾನ್ಯಗೊಳಿಸಲು ಮತ್ತು ವೇಳಾಪಟ್ಟಿಯ ಪ್ರಕಾರ ರೈಲು ಚಲಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ’ ಎಂದು ನಮ್ಮ ಮೆಟ್ರೊ ಪೋಸ್ಟ್ ಹಂಚಿಕೊಂಡಿದೆ.
ಈ ಮೊದಲು ‘ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್‌ಪಾಳ್ಯ ನಡುವೆ ನೇರಳೆ ಮಾರ್ಗದ ರೈಲುಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಇದರಿಂದಾಗಿ ರೈಲು ವೇಳಾಪಟ್ಟಿಯಲ್ಲಿ ಅಡಚಣೆಯಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ತಂಡ ಕೆಲಸ ಮಾಡುತ್ತಿದೆ. ಅನಾನುಕೂಲತೆಗಾಗಿ ವಿಷಾದಿಸುತ್ತೇವೆ’ ಎಂದು ನಮ್ಮ ಮೆಟ್ರೊ ಮಾಹಿತಿ ಹಂಚಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.