ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಶುಕ್ರವಾರ ಜಯನಗರದಲ್ಲಿ ರೋಡ್ ಶೋ ನಡೆಸಿ, ಮತಯಾಚಿಸಿದರು.
ಕಾಂಗ್ರೆಸ್‌ನಲ್ಲಿ ಮೂರು ತಲೆ ಮಾರುಗಳಿಂದ ರಾಜಕಾರಣವನ್ನೇ ತಮ್ಮ ಜೀವನೋಪಾಯವಾಗಿ ಮಾಡಿಕೊಂಡಿದ್ದಾರೆ. ತಮ್ಮ ಮಕ್ಕಳ, ಮೊಮ್ಮಕ್ಕಳ ಭವಿಷ್ಯಕ್ಕೋಸ್ಕರ ರಾಜಕೀಯ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಮಾತ್ರ ದೇಶದ ಭವಿಷ್ಯಕ್ಕೋಸ್ಕರ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ತಿಳಿಸಿದರು.
‘ಭಾರತ ಮೊದಲು’ ಎಂಬುದು ನರೇಂದ್ರಮೋದಿ ನೇತೃತ್ವದ ಸರ್ಕಾರದ ವಿದೇಶಾಂಗ ನೀತಿಯ ಪ್ರಮುಖ ಅಂಶವಾಗಿದ್ದು, ದೇಶದ ಕಾರ್ಯತಂತ್ರ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ಹೆಚ್ಚಿನ ಆರ್ಥಿಕಾಭಿವೃದ್ಧಿಯನ್ನು ಸಾಧಿಸುವ ಉದ್ದೇಶವನ್ನು ಇದು ಹೊಂದಿದೆ ಎಂದು ಹೇಳಿದರು.
‘ಕ್ಷೇತ್ರದಲ್ಲಿ ಪಕ್ಷದ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ಕಾರ್ಯಕರ್ತರು ಮತ್ತು ಮುಖಂಡರು ಬಿಸಿಲನ್ನು ಲೆಕ್ಕಿಸದೆ ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರಮೋದಿಯವರನ್ನು ಮತ್ತೆ ಆಯ್ಕೆ ಮಾಡಲು ಮತದಾರರು ಕಾತರದಿಂದ ಮತದಾನ ದಿನವನ್ನು ಕಾಯುತ್ತಿದ್ದಾರೆ’ ಎಂದರು.
ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಮುಖಂಡರಾದ ಎಸ್.ಕೆ. ನಟರಾಜ್, ಬಿ. ಸೋಮಶೇಖರ್, ಚಂದ್ರಶೇಖರ್ ರಾಜು, ಗೋವಿಂದ ನಾಯ್ಡು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.