ADVERTISEMENT

ಉಗ್ರ ಚಟುವಟಿಕೆ: ಇಬ್ಬರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 17:19 IST
Last Updated 19 ಆಗಸ್ಟ್ 2024, 17:19 IST
<div class="paragraphs"><p>ನ್ಯಾಯಾಲಯ ( ಸಾಂಕೇತಿಕ ಚಿತ್ರ)</p></div>

ನ್ಯಾಯಾಲಯ ( ಸಾಂಕೇತಿಕ ಚಿತ್ರ)

   

ಬೆಂಗಳೂರು: ರಾಜ್ಯದಲ್ಲಿ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ಬಂಧಿತರಾಗಿರುವ ಇಬ್ಬರು ಶಂಕಿತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಗಳಾದ ಅಬ್ದುಲ್ ಮತೀನ್ ತಾಹಾ ಮತ್ತು ಮುಸಾವೀರ್‌ ಹುಸೇನ್ ಶಾಜೀದ್‌ ಅವರನ್ನು ಏಪ್ರಿಲ್ 12ರಂದು ಬಂಧಿಸಲಾಗಿತ್ತು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 18 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. 2020ರಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚುವರಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಸಲ್ಲಿಸಿದ್ದಾರೆ.

ಈ ಇಬ್ಬರು ಶಂಕಿತರು ‘ದಿ ರಾಮೇಶ್ವರಂ ಕೆಫೆ’ಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲೂ ಭಾಗಿಯಾಗಿದ್ದರು. ಇವರನ್ನು ಕೋಲ್ಕತ್ತದಲ್ಲಿ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.