ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ನೆದರ್ಲೆಂಡ್ ಪ್ರಧಾನಿ ಮಾರ್ಕ್ ರುಟ್ಟೆ ಅವರು ಸೆ.11ರಂದು (ಸೋಮವಾರ) ಬೆಂಗಳೂರಿಗೂ ಭೇಟಿ ನೀಡುತ್ತಿದ್ದಾರೆ.
ನಗರದಲ್ಲಿ ನಡೆಯುವ ’ಎಕನಾಮಿಕ್ಸ್ ಮಿಷನ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನೆದರ್ಲೆಂಡ್ ಕಾನ್ಸುಲೆಟ್ ಜನರಲ್‌ಗೂ ಭೇಟಿ ನೀಡಲಿದ್ದಾರೆ. ನೆದರ್ಲೆಂಡ್ ಜತೆಗೆ ವ್ಯಾಪಾರ ಸಂಬಂಧ ಹೊಂದಿರುವ ಭಾರತದ ಕಂಪನಿಗಳ ಪ್ರತಿನಿಧಿಗಳ ಜತೆಗೆ ಸಂವಾದ ನಡೆಸಲಿದ್ದಾರೆ. ಎನ್‌ಎಕ್ಸ್‌ಒ ಪ್ರಯೋಗಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಅದಾದ ಮೇಲೆ ದುಂಡುಮೇಜಿನ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.