ಬೆಂಗಳೂರು: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲವೆಡೆ ಬುಧವಾರ ಹಾಗೂ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ಬುಧವಾರ, ಈ ಜಿಲ್ಲೆಗಳ ಜತೆಗೆ ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗೆ ಗುರುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಮತ್ತು ಕರಾವಳಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಹಲವು ಸ್ಥಳಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಇದೇ 16ರವರೆಗೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.