ಬೆಂಗಳೂರು: ನಗರದ ಮೆಜೆಸ್ಟಿಕ್‌ನಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವೃದ್ಧರೊಬ್ಬರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ನಿಲ್ದಾಣದ 13ನೇ ನೇ ಪ್ಲಾಟ್‌ಫಾರ್ಮ್‌ನಲ್ಲಿ ವೃದ್ಧ ಏಕಾಏಕಿ ಕುಸಿದು ಬಿದ್ದಿದ್ದರು. ಜ್ವರದಿಂದ ಅವರು ಬಳಲುತ್ತಿದ್ದರು. ನಿಲ್ದಾಣದಲ್ಲಿದ್ದ ಬಿಎಂಟಿಸಿ ನೌಕರರೇ ಆಂಬುಲೆನ್ಸ್‌ಗೆ ಕರೆ ಮಾಡಿದ್ದರು.
ಪಿಪಿಟಿ ಕಿಟ್ ಧರಿಸಿಯೇ ಸ್ಥಳಕ್ಕೆ ಬಂದ ಆಂಬುಲೆನ್ಸ್ ಸಿಬ್ಬಂದಿ,ವೃದ್ಧನಿಗೆ ಸ್ಯಾನಿಟೈಸ್ ಮಾಡಿ ಆಸ್ಪತ್ರೆಗೆ ಕರೆದೊಯ್ದರು.
ವೃದ್ಧ ಕುಸಿದು ಬಿದ್ದಿದ್ದನ್ನು ಕಂಡು, ಪ್ರಯಾಣಿಕರು ಸ್ಥಳದಿಂದ ಓಡಿ ಹೋದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.