ಬೆಂಗಳೂರು: ‘ಕಾರ್ಗಿಲ್ ಯುದ್ಧ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ದೇಶ ರಕ್ಷಣೆಗಾಗಿ ಮಡಿದ ವೀರ ಸೈನಿಕರ ತ್ಯಾಗ, ಬಲಿದಾನ, ಸಾಹಸ ಅವಿಸ್ಮರಣೀಯ’ ಎಂದು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆಯ ಅಂಗವಾಗಿ ಸೇನಾಧಿಕಾರಿಗಳಿಗೆ ಶ್ರದ್ಧಾಂಜಲಿ ಕಳಸ ಹಸ್ತಾಂತರಿಸಿ ಮಾತನಾಡಿದ ಅವರು, ‘ಹುತಾತ್ಮರಾಗಿರುವ ಯೋಧರು ನಮಗೆ ಪ್ರೇರಣೆ. ನಮ್ಮ ತ್ರಿವರ್ಣ ಧ್ವಜದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯಲು ತಮ್ಮ ಬದುಕನ್ನೇ ತ್ಯಾಗ ಮಾಡಿದ ಪ್ರತಿಯೊಬ್ಬ ಯೋಧರ ಶೌರ್ಯವನ್ನು ಇಡೀ ದೇಶ ಸದಾ ಸ್ಮರಿಸುತ್ತದೆ’ ಎಂದರು.
‘ಹುತಾತ್ಮ ಯೋಧರ ಕುಟುಂಬಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ, ಎಲ್ಲ ನೆರವು ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕರ್ನಲ್ ಪಿ.ವಿ. ಹರಿ, ಕ್ಯಾಪ್ಟನ್ ಭಂಡಾರಿ, ಎನ್.ಕೆ. ಮಣಿಕಂಠನ್, ಬಿ.ಪಿ. ಶಿವಕುಮಾರ್, ಆರ್. ವಾಸುದೇವನ್ , ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ, ಸೇನೆಯ ಉನ್ನತ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.