ADVERTISEMENT

ಮನೆಯ ಬೀಗ ಒಡೆದು ಚಿನ್ನಾಭರಣ, ನಗದು ಕಳ್ಳತನ ಪ್ರಕರಣ: ರೌಡಿಶೀಟರ್ ಸೇರಿ ಐವರ ಸೆರೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 16:22 IST
Last Updated 5 ನವೆಂಬರ್ 2024, 16:22 IST
ಮಾಣಿಕ್ಯ 
ಮಾಣಿಕ್ಯ    

ಬೆಂಗಳೂರು: ಮನೆಗಳ ಬಾಗಿಲಿಗೆ ಹಾಕಲಾಗಿದ್ದ ಬೀಗ ಒಡೆದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ರೌಡಿಶೀಟರ್, ಆತನ ಪತ್ನಿ ಸೇರಿದಂತೆ ಐವರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಬ್ಯಾಡರಹಳ್ಳಿಯ ಮಾಣಿಕ್ಯ(26), ರೌಡಿಶೀಟರ್ ಗೌತಮ್ ಶೆಟ್ಟಿ(30), ಆತನ ಪತ್ನಿ ಶಿಬಾ(28), ಸಹಚರರಾದ ದಯಾನಂದ್(27) ಮತ್ತು ನರಸಿಂಹ(28) ಬಂಧಿತರು.

ಆರೋಪಿಗಳಿಂದ ₹21 ಲಕ್ಷ ಮೌಲ್ಯದ 325 ಗ್ರಾಂ ಚಿನ್ನಾಭರಣ, ಒಂದು ಕೆ.ಜಿ 800 ಗ್ರಾಂ ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

‘ಆರೋಪಿಗಳು ಎಚ್‌ಎಂಟಿ ಲೇಔಟ್‌ನ ಮನೆಯ ಬೀಗ ಒಡೆದು ಒಳ ನುಗ್ಗಿ ಚಿನ್ನಾಭರಣ ದೋಚಿ ಪರಾರಿ ಆಗಿದ್ದರು. ಮನೆ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಕದ್ದ ಚಿನ್ನಾಭರಣಗಳನ್ನು ಹಣಕಾಸು ಸಂಸ್ಥೆ ಹಾಗೂ ಚಿನ್ನಾಭರಣ ಅಂಗಡಿಗಳಲ್ಲಿ ಅಡಮಾನ ಇಡುತ್ತಿದ್ದರು. ಆ ಚಿನ್ನವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಗೌತಮ್ ಶೆಟ್ಟಿ ಮಾಗಡಿ ರಸ್ತೆ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಆತನ ಪತ್ನಿ ಶಿಬಾ ಪತಿ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದಳು. ಆರೋಪಿ ಮಾಣಿಕ್ಯನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸರು ತಿಳಿಸಿದರು.

ಗೌತಮ್‌ 
ಶಿಬಾ 
ದಯಾನಂದ್‌ 
ನರಸಿಂಹ 
ಆರೋಪಿಗಳಿಂದ ಜಪ್ತಿ ಮಾಡಲಾದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.