ADVERTISEMENT

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳ ಕಳವು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2024, 15:29 IST
Last Updated 13 ಅಕ್ಟೋಬರ್ 2024, 15:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಮನೆ ಮುಂದೆ ನಿಲುಗಡೆ ಮಾಡಿದ್ದ ಎರಡು ದ್ವಿಚಕ್ರ ವಾಹನಗಳನ್ನು ಅಪರಿಚಿತ ವ್ಯಕ್ತಿ ಕಳವು ಮಾಡಿರುವ ಘಟನೆ ಶಿವಾಜಿ ನಗರದಲ್ಲಿ ನಡೆದಿದೆ.

ಆರೋಪಿ ಬೈಕ್‌ನ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹತ್ತು ನಿಮಿಷಗಳ ಅಂತರದಲ್ಲಿ ಎರಡು ವಾಹನಗಳ ಕಳುವಾಗಿದೆ.

ಅ.10ರಂದು ನಡೆದ ಘಟನೆಯ ವಿಡಿಯೊವನ್ನು ವಾಹನದ ಮಾಲೀಕರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ ನಗರ ಪೊಲೀಸರ ಖಾತೆಗೆ ಟ್ಯಾಗ್ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.