ಬೆಂಗಳೂರು: ಕೋವಿಡ್–19 ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಎಲ್ಲ ಸಚಿವರು, ಶಾಸಕರು, ಸಭಾಪತಿ ಮತ್ತು ಸಭಾಧ್ಯಕ್ಷರ ವೇತನ ಕಡಿತದಲ್ಲಿ ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ಬಿಟ್ಟು, ಉಳಿದ ಎಲ್ಲ ಭತ್ಯೆಗಳಲ್ಲೂ ಶೇ 30 ಕಡಿತ ಮಾಡಲಾಗುವುದು.
ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸ್ಪಷ್ಟನೆ ನೀಡಿದೆ.
ಕರ್ನಾಟಕ ವಿಧಾನಮಂಡಲ ಸದಸ್ಯರ ವೇತನ, ಪಿಂಚಣಿ, ಮತ್ತು ಇತರ ಭತ್ಯೆಗಳ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 2020ರ ಉಪಬಂಧ ಅನುಸಾರ ಸಂಬಳ, ದೂರವಾಣಿ ವೆಚ್ಚ, ಚುನಾವಣಾ ಕ್ಷೇತ್ರ ಭತ್ಯೆ, ಅಂಚೆ ವೆಚ್ಚ, ಕೊಠಡಿ ಸೇವಕರ ಭತ್ಯೆ, ನಿಗದಿತ ವಿಮಾನ ಮತ್ತು ರೈಲ್ವೆ ಪ್ರಯಾಣ ಭತ್ಯೆ(ವಾರ್ಷಿಕ) ಇವುಗಳಲ್ಲಿ ಶೇ.30 ಕಡಿತ ಮಾಡಲಾಗುವುದು.
ಸಭೆಗಳಿಗೆ ಹಾಜರಾಗಲು ದಿನಭತ್ಯೆ(ರಾಜ್ಯದೊಳಗೆ ಮತ್ತು ರಾಜ್ಯದ ಹೊರಗೆ), ಪ್ರಯಾಣ ಭತ್ಯೆ, ವಾಹನ ಭತ್ಯೆ(ಪ್ರತಿ ಕಿ.ಮೀ.ಗೆ) ಇವುಗಳನ್ನು ಕಡಿತಗೊಳಿಸುವುದಿಲ್ಲ ಎಂದು ಆದೇಶ ತಿಳಿಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.