ADVERTISEMENT

ಬೆಸ್ಕಾಂ ಎಂ.ಡಿ.ಗೆ ‘ಲೋಕಾಯುಕ್ತ’ ಹೆಸರಿನಲ್ಲಿ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 4 ಮೇ 2024, 22:33 IST
Last Updated 4 ಮೇ 2024, 22:33 IST
<div class="paragraphs"><p>ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ</p></div>

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ

   

ಬೆಂಗಳೂರು: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದಿದ್ದು, ಈ ಬಗ್ಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬೆಸ್ಕಾಂ ಅಧಿಕಾರಿ ಮೃತ್ಯುಂಜಯ ಅವರು ಬೆದರಿಕೆ ಕರೆಗಳ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಮೇ 1ರಂದು ಮೃತ್ಯುಂಜಯ ಅವರಿಗೆ ಕರೆ ಮಾಡಿದ್ದ ಅಪರಿಚಿತ, ತಾನು ಲೋಕಾಯುಕ್ತ ಪೊಲೀಸ್ ಎಂಬುದಾಗಿ ಹೇಳಿದ್ದ. ತಮ್ಮ ಕಚೇರಿಯಲ್ಲಿರುವ ಎಲ್ಲರ ಮೇಲೆ ದಾಳಿ ಮಾಡುವುದಾಗಿ ಹೇಳಿ ಬೆದರಿಸಿದ್ದ. ಮಹಾಂತೇಶ ಬೀಳಗಿ, ಅವರ ಆಪ್ತ ಕಾರ್ಯದರ್ಶಿ ಪಿ. ಚಂದ್ರಶೇಖರ್, ತಾಂತ್ರಿಕ ಸಹಾಯಕ ಎಸ್‌.ವಿ. ನವನೀತ್ ಕೃಷ್ಣನ್ ಅವರಿಗೂ ಕರೆ ಮಾಡಿ ಆರೋ‍‍‍ಪಿ ಮಾತನಾಡಿದ್ದ.’

‘ಲೋಕಾಯುಕ್ತ ಪೊಲೀಸರ ಹೆಸರು ಹೇಳಿಕೊಂಡು ವಿನಾಕಾರಣ ಕರೆ ಮಾಡುತ್ತಿರುವ ಅಪರಿಚಿತ ಕಿರುಕುಳ ನೀಡುತ್ತಿರುವುದಾಗಿ ದೂರುದಾರರು ಆರೋಪಿಸಿದ್ದಾರೆ. ಕೃತ್ಯ ಎಸಗಿರುವ ಆರೋಪಿ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.