ADVERTISEMENT

ಹವಾಲಾ ದಂಧೆ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 23:05 IST
Last Updated 18 ಅಕ್ಟೋಬರ್ 2024, 23:05 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಅಂತರರಾಜ್ಯ ಮಟ್ಟದ ಹವಾಲಾ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಆಗ್ನೇಯ ವಿಭಾಗದ ಸೈಬರ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳಿಯ ಅಮನ್, ಅಹಮದಾಬಾದ್‌ನ ಗುರುಬಾಯ್ ಹಾಗೂ ಭರತ್ ಬಾಯಿ ಬಂಧಿತರು.

ADVERTISEMENT

ಎಚ್‌ಎಸ್‌ಆರ್ ಲೇಔಟ್‌ನ ವೆಂಕಟಾಪುರದ ವ್ಯಕ್ತಿಯೊಬ್ಬರನ್ನು ವಾಟ್ಸ್ಆ್ಯಪ್‌ನಲ್ಲಿ ಸಂಪರ್ಕಿಸಿದ್ದ ಆರೋಪಿಗಳು, ಗಣೇಶ ಗ್ರೀನ್ ಭಾರತ್ ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗಲಿದೆ ಎಂದು ಆಮಿಷವೊಡ್ಡಿದ್ದರು. ನಂತರ, ಹಂತ ಹಂತವಾಗಿ ₹ 35.35 ಲಕ್ಷವನ್ನು ವಿವಿಧ ಬ್ಯಾಂಕ್‌ಗಳ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದರು. ಈ ಸಂಬಂಧ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

‘ದೂರುದಾರರಿಂದ ಆರೋಪಿಗಳು ವಿವಿಧ ರಾಜ್ಯಗಳ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿರುವುದು ತನಿಖೆಯಿಂದ ಗೊತ್ತಾಗಿದೆ. ಆ ಹಣವನ್ನು ಡ್ರಾ ಮಾಡಿದ್ದ ಇಬ್ಬರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಇನ್ನೂ ಹಲವರು ದಂಧೆಯಲ್ಲಿ ತೊಡಗಿರುವುದು ಪತ್ತೆ ಆಯಿತು’ ಎಂದು ಪೊಲೀಸರು ಹೇಳಿದರು.

‘ವಿವಿಧ ಬ್ಯಾಂಕ್ ಖಾತೆಗಳ ಕೆವೈಸಿ ಹಾಗೂ ತಾಂತ್ರಿಕ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲಿಸಿದಾಗ ಹುಬ್ಬಳ್ಳಿಯ ವ್ಯಕ್ತಿ ದಂಧೆಯಲ್ಲಿ ಭಾಗಿ ಆಗಿರುವುದು ಗೊತ್ತಾಗಿತ್ತು. ನಂತರ, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.