ADVERTISEMENT

ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 4,064 ಮಂದಿಗೆ ದಂಡ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 14:44 IST
Last Updated 22 ಜೂನ್ 2024, 14:44 IST
<div class="paragraphs"><p>ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ನೋಟ </p></div>

ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ನೋಟ

   

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಮೇ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ 4,064 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. 

ಮೇನಲ್ಲಿ 19,125 ಟ್ರಿಪ್‌ಗಳನ್ನು ತಪಾಸಣೆ ನಡೆಸಲಾಗಿತ್ತು. ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ 4,064 ಮಂದಿ ಪತ್ತೆಯಾಗಿದ್ದರು. ಅವರಿಂದ ₹ 8,25,210 ದಂಡ ವಸೂಲಿ ಮಾಡಲಾಯಿತು. ಕರ್ತವ್ಯ ಲೋಪವೆಸಗಿದ ಕಾರಣಕ್ಕಾಗಿ ಸಂಸ್ಥೆಯ 1,092 ನಿರ್ವಾಹಕರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ADVERTISEMENT

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 501 ಪುರುಷ ಪ್ರಯಾಣಿಕರಿಗೆ ₹ 50,100 ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.