ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಗಡಿ ಭಾಗ ಅರಣ್ಯ ಪ್ರದೇಶದ ರಸ್ತೆಯಲ್ಲಿ ಹುಲಿ ಮತ್ತು ಚಿರತೆ ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಂಗಳವಾರ ಮಧ್ಯಾಹ್ನ 1.57ರ ಸಮಯದಲ್ಲಿ ಹುಲಿ ಕಂಡಿದೆ. ನಂತರ ಇದೇ ಸ್ಥಳದಲ್ಲಿ ಸಂಜೆ 4ರ ಸುಮಾರಿನಲ್ಲಿ ಚಿರತೆ ಓಡಾಟ ನಡೆಸಿರುವ ದೃಶ್ಯ ಕೂಡ ಸೆರೆಯಾಗಿದೆ.
‘ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಹುಲಿ ಮತ್ತು ಚಿರತೆ ಕಾಣಿಸಿಕೊಂಡಿರುವುದು ಕಾಡು ಸಂರಕ್ಷಿಸಿ, ಪ್ರಾಣಿಗಳನ್ನು ಉಳಿಸುವ ಜವಾಬ್ದಾರಿ ಪ್ರತೀಕ‘ ಎಂದು ಈ ದೃಶ್ಯಗಳನ್ನು ಹಂಚಿಕೊಂಡಿರುವ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.