ADVERTISEMENT

ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಪಿಐಎಲ್‌: ಸರ್ಕಾರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 19:40 IST
Last Updated 17 ಸೆಪ್ಟೆಂಬರ್ 2019, 19:40 IST
   

ಬೆಂಗಳೂರು: ಟಿಪ್ಪು ಜಯಂತಿ ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್ ಆಲಿ ಷಾ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿರುವ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಲಾಗಿದೆ.

ADVERTISEMENT

ಪ್ರತಿವರ್ಷ ನವೆಂಬರ್ 10 ರಂದು ರಾಜ್ಯದಾದ್ಯಂತ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು 2015ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಬಿಜೆಪಿ ಸರ್ಕಾರ 2019ರ ಜುಲೈ 30ರಂದು ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.