ADVERTISEMENT

ಎರಡು ಗಂಟೆಯಲ್ಲಿ ₹26.26 ಲಕ್ಷ ದಂಡ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 16:36 IST
Last Updated 18 ಡಿಸೆಂಬರ್ 2020, 16:36 IST

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಎರಡು ಗಂಟೆಯಲ್ಲಿ ₹26.26 ಲಕ್ಷ ದಂಡ ಸಂಗ್ರಹಿಸಿದ್ದಾರೆ.

‘ನಗರದ 44 ಸಂಚಾರ ಠಾಣೆ ವ್ಯಾಪ್ತಿಯ 174 ಸ್ಥಳಗಳಲ್ಲಿ ಏಕಕಾಲದಲ್ಲೇ ಎರಡು ಗಂಟೆ ಅವಧಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕರನ್ನು ಪತ್ತೆ ಮಾಡಿ, 5679 ಪ್ರಕರಣ ದಾಖಲಿಸಿಕೊಳ್ಳಲಾಯಿತು’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹೇಳಿದರು.

‘ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಕೆಲ ಪ್ರದೇಶದಲ್ಲಿ ಪೊಲೀಸರು ಇರುವುದಿಲ್ಲವೆಂದು ನಿಯಮ ಉಲ್ಲಂಘಿಸುವರ ಸಂಖ್ಯೆಯೂ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಸ್ಥಳದಲ್ಲೂ ವಾಹನಗಳ ತಪಾಸಣೆ ನಡೆಸಲಾಗುವುದು’ ಎಂದೂ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.