ADVERTISEMENT

ಒಂದೇ ದಿನ ಮೂರು ಪ್ರತಿಭಟನೆ: ದಟ್ಟಣೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2019, 19:17 IST
Last Updated 12 ಫೆಬ್ರುವರಿ 2019, 19:17 IST
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಎದುರಿನ ಶೇಷಾದ್ರಿ ರಸ್ತೆಯಲ್ಲಿ ಮಂಗಳವಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು – ಪ್ರಜಾವಾಣಿ ಚಿತ್ರ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಎದುರಿನ ಶೇಷಾದ್ರಿ ರಸ್ತೆಯಲ್ಲಿ ಮಂಗಳವಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು – ಪ್ರಜಾವಾಣಿ ಚಿತ್ರ   

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಒಂದೇ ದಿನ ಮೂರು ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದರಿಂದ ಉದ್ಯಾನದ ಸುತ್ತಮುತ್ತ ವಾಹನಗಳ ದಟ್ಟಣೆ ಉಂಟಾಯಿತು.

‘ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ’, ‘ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ’ ಹಾಗೂ ‘ಸಹಕಾರ ಸಂಘಗಳ ನೌಕರರ ಸಂಘ’ದ ಸದಸ್ಯರು ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಐದು ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಉದ್ಯಾನ ಹಾಗೂ ಅಕ್ಕ–ಪಕ್ಕದ ರಸ್ತೆಯಲ್ಲಿ ಸೇರಿದ್ದರು. ಅವರನ್ನು ಕರೆತಂದಿದ್ದ ವಾಹನಗಳನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿತ್ತು. ಮಧ್ಯಾಹ್ನ ಪ್ರತಿಭಟನಾಕಾರರು ರಸ್ತೆಗೆ ಬಂದು ಪ್ರತಿಭಟನೆ ಆರಂಭಿಸಿದರು. ಅದರಿಂದಾಗಿ ಶೇಷಾದ್ರಿ ಮೇಲ್ಸೇತುವೆ ಹಾಗೂ ರಸ್ತೆ, ಅರಮನೆ ರಸ್ತೆ, ಆನಂದರಾವ್ ವೃತ್ತ, ಗಾಂಧಿನಗರ, ನೃಪತುಂಗ ರಸ್ತೆ, ಮೈಸೂರು ಬ್ಯಾಂಕ್‌ ವೃತ್ತ, ಕಾರ್ಪೊರೇಷನ್ ವೃತ್ತ ಹಾಗೂ ಸುತ್ತಮುತ್ತ ವಾಹನಗಳ ದಟ್ಟಣೆ ಉಂಟಾಯಿತು.

ADVERTISEMENT

ಸವಿತಾ ಮಹರ್ಷಿ ಜಯಂತಿಯ ಮೆರವಣಿಗೆ ಸಹ ಶೇಷಾದ್ರಿ ರಸ್ತೆಯಲ್ಲಿ ಸಾಗಿ ಬಂದಿದ್ದರಿಂದ ವಾಹನಗಳ ದಟ್ಟಣೆ ಮತ್ತಷ್ಟು ಹೆಚ್ಚಾಯಿತು. ಇಡೀದಿನ ದಟ್ಟಣೆ ನಿಯಂತ್ರಿಸಲು ಪೊಲೀಸರು ಹೈರಾಣಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.