ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಉತ್ತರ ಹಾಗೂ ಪೂರ್ವ ವಿಭಾಗದ ಸಂಚಾರ ಪೊಲೀಸರು, ವಾಹನ ಸವಾರರು ಹಾಗೂ ಚಾಲಕರ ವಿರುದ್ಧ ಒಟ್ಟು 2,121 ಪ್ರಕರಣ ದಾಖಲಿಸಿಕೊಂಡು, ₹10.86 ಲಕ್ಷ ದಂಡ ಸಂಗ್ರಹಿಸಿದ್ದಾರೆ.
ಉತ್ತರ ವಿಭಾಗದ ಸಂಚಾರ ಪೊಲೀಸರು ಶುಕ್ರವಾರ ಒಂದೇ ದಿನ 948 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉತ್ತರ ವಿಭಾಗದ ವ್ಯಾಪ್ತಿಯಲ್ಲಿ ಸಂಭವಿಸುತ್ತಿರುವ ಅಪಘಾತ ತಡೆಗಟ್ಟುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉಲ್ಲಂಘನೆ ಕಂಡುಬಂದರೆ ಅಂಥವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತಿದೆ. ಒಂದೇ ದಿನ ₹4.80 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಇನ್ನು, ಪೂರ್ವ ಸಂಚಾರ ವಿಭಾಗದಲ್ಲೂ ವಿಶೇಷ ಕಾರ್ಯಾಚರಣೆ ನಡೆಯಿತು. ನಿಯಮ ಉಲ್ಲಂಘಿಸಿದ ವಾಹನ ಸವಾರರು ಹಾಗೂ ಚಾಲಕರ ವಿರುದ್ದ 1,173 ಪ್ರಕರಣ ದಾಖಲಿಸಿ, ₹5.86 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.