ADVERTISEMENT

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 1,507 ಪ್ರಕರಣ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2024, 14:41 IST
Last Updated 17 ನವೆಂಬರ್ 2024, 14:41 IST
   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಬೈಕ್‌ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ನಗರ ಸಂಚಾರ ವಿಭಾಗದ ಪೊಲೀಸರು, 1,507 ಪ್ರಕರಣ ದಾಖಲಿಸಿಕೊಂಡು ₹7.62 ಲಕ್ಷ ದಂಡ ಸಂಗ್ರಹಿಸಿದ್ದಾರೆ.

ಅನಧಿಕೃತವಾಗಿ ವಾಹನ ನಿಲುಗಡೆ ಮಾಡುತ್ತಿದ್ದವರ ವಿರುದ್ಧ 127 ಪ್ರಕರಣ ದಾಖಲಿಸಿಕೊಂಡು, ₹64 ಸಾವಿರ ದಂಡ ಸಂಗ್ರಹಿಸಿದ್ದಾರೆ.

ಪ್ರವೇಶ ನಿಷೇಧಿತ ರಸ್ತೆಗಳಲ್ಲಿ ಸಂಚರಿಸುತ್ತಿದ್ದವರ ವಿರುದ್ಧ 722 ಪ್ರಕರಣ ದಾಖಲಿಸಿಕೊಂಡು, ₹3.66 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಬೈಕ್‌ ಚಾಲನೆ ಮಾಡುತ್ತಿದ್ದವರ ವಿರುದ್ಧ 68 ಪ್ರಕರಣ ದಾಖಲಿಸಿಕೊಂಡು, ₹34 ಸಾವಿರ ದಂಡ ಸಂಗ್ರಹಿಸಲಾಗಿದೆ. ‌

ADVERTISEMENT

ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡಿದ ಆರೋಪದಡಿ 590 ಪ್ರಕರಣ ದಾಖಲಿಸಿಕೊಂಡು, ₹ 29 ಸಾವಿರ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.