ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ, ಚಾಲನೆ ಮಾಡುತ್ತಿರುವ ದ್ವಿಚಕ್ರ ವಾಹನಗಳ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ಪೂರ್ವ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದು, ಒಟ್ಟು 1,060 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಯಾಣಿಕರು ಕೇಳಿದ ಸ್ಥಳಕ್ಕೆ ಬಾಡಿಗೆಗೆ ತೆರಳಲು ನಿರಾಕರಣೆ, ದುಬಾರಿ ಬಾಡಿಗೆ, ಕರ್ಕಶವಾಗಿ ಶಬ್ದ ಮಾಡುವ ಸೈಲೆನ್ಸರ್ ಅಳವಡಿಕೆ, ಟ್ರಾಫಿಕ್ ಸಿಗ್ನಲ್ ದಾಟಿ ನಿಯಮ ಉಲ್ಲಂಘನೆ, ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆ, ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಸುರಕ್ಷತಾ ಬೆಲ್ಟ್ ಧರಿಸದೆ ವಾಹನ ಚಾಲನೆ, ನಿಗದಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವುದು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸವಾರಿ ಮಾಡಿ ನಿಯಮ ಉಲ್ಲಂಘಿಸುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿದ ಸವಾರರಿಂದ ಒಂದೇ ದಿನದಲ್ಲಿ ₹5.30 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.