ADVERTISEMENT

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 498 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 14:47 IST
Last Updated 29 ಅಕ್ಟೋಬರ್ 2024, 14:47 IST
<div class="paragraphs"><p>ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಂದ ಪೊಲೀಸರು ದಂಡ ಪಾವತಿಸಿಕೊಳ್ಳುತ್ತಿರುವ ಚಿತ್ರಣ</p></div>

ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಂದ ಪೊಲೀಸರು ದಂಡ ಪಾವತಿಸಿಕೊಳ್ಳುತ್ತಿರುವ ಚಿತ್ರಣ

   

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರು ಹಾಗೂ ಸವಾರರ ವಿರುದ್ಧ ಪಶ್ಚಿಮ ಸಂಚಾರ ವಿಭಾಗದ ಪೊಲೀಸರು 498 ಪ್ರಕರಣ ದಾಖಸಿಕೊಂಡು ದಂಡ ವಿಧಿಸಿದ್ದಾರೆ.

ಏಕಮುಖ ರಸ್ತೆ ಹಾಗೂ ನಿರ್ಬಂಧಿತ ರಸ್ತೆಯಲ್ಲಿ ವಾಹನ ಸಂಚಾರ ಮಾಡಿದ್ದವರ ವಿರುದ್ಧ 401 ಪ್ರಕರಣ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡಿದ್ದವರ ವಿರುದ್ಧ 49 ಹಾಗೂ ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಸವಾರಿ ಮಾಡುತ್ತಿದ್ದವರ ವಿರುದ್ಧ 48 ಪ್ರಕರಣ ದಾಖಲಿಸಲಾಗಿದೆ. ಒಟ್ಟು ₹2.54 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಡಿಸಿಪಿ ಅನಿತಾ ಬಿ. ಹದ್ದಣ್ಣವರ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.