ಬೆಂಗಳೂರು: ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರು ರಚಿಸಿರುವ ಹತ್ತು ಪುಸ್ತಕಗಳನ್ನು ಸೇಂಟ್ ಜೋಸೆಫ್ ಸಂಜೆ ಕಾಲೇಜಿನಲ್ಲಿ ಶುಕ್ರವಾರ (ಆಗಸ್ಟ್ 9) ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಮೈತ್ರಿಕೂಟ ತಿಳಿಸಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮೈತ್ರಿಕೂಟದ ಸದಸ್ಯೆ ಅಕ್ಕೈ ಪದ್ಮಶಾಲಿ, ‘ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿರುವ ಆಲ್ಬಮ್ ವಿಡಿಯೊ ಬಿಡುಗಡೆ ಆಗಲಿದೆ. ನಮ್ಮ ಸಮುದಾಯದ ಕಲಾವಿದರು ನಟಿಸಿರುವ ‘ತಲ್ಕಿ’ ಎಂಬ ನಾಟಕ ಪ್ರದರ್ಶನವಾಗಲಿದೆ’ ಎಂದರು.
ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ, ನಟ ಪ್ರಕಾಶ್ ರಾಜ್, ಸಚಿವರಾದ ಎಚ್.ಕೆ. ಪಾಟೀಲ, ಲಕ್ಷ್ಮಿ ಹೆಬ್ಬಾಳಕರ, ಶಿವರಾಜ ತಂಗಡಗಿ ಭಾಗವಹಿಸಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.