ಬೆಂಗಳೂರು: 'ಅಗತ್ಯ ಸೇವೆಗಳಲ್ಲಿ ಟ್ಯಾಕ್ಸಿಯೂ ಒಂದಾಗಿದ್ದು, ಲಾಕ್‍ಡೌನ್ ಸಮಯದಲ್ಲಿ ಜನರ ತುರ್ತು ಸೇವೆಗಳಿಗಾಗಿ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ನೀಡಬೇಕು' ಎಂದು ರಾಜ್ಯ ಟ್ರಾವೆಲ್ ಆಪರೇಟರ್‌ಗಳ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಹೊಳ್ಳ ಮನವಿ ಮಾಡಿದ್ದಾರೆ.
'ವೃದ್ಧರು, ರೋಗಿಗಳು ಹಾಗೂ ವಾಹನ ವ್ಯವಸ್ಥೆ ಇಲ್ಲದೆ ಅಗತ್ಯ ಸೇವೆಗಳಿಗಾಗಿ ಮನೆಯಿಂದ ಹೊರಬರುವವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲ. ಇವರಿಗೆ ನೆರವಾಗುವ ದೃಷ್ಟಿಯಿಂದ ಟ್ಯಾಕ್ಸಿಗಳಲ್ಲಿ ಒಬ್ಬರು ಪ್ರಯಾಣಿಕರು ಸಂಚರಿಸಲು ಅನುಮತಿ ನೀಡಬೇಕು. ಲಾಕ್‍ಡೌನ್ ವೇಳೆ ಟ್ಯಾಕ್ಸಿ ಸಂಚಾರಕ್ಕೆ ನಿರ್ಬಂಧ ಹೇರಬಾರದು' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.