ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ನಡೆಸಲು ಬೆಂಗಳೂರು ಟರ್ಫ್ ಕ್ಲಬ್‌ಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.
ಆನ್‌ಲೈನ್ ಬೆಟ್ಟಿಂಗ್‌ಗೆ ಅನುಮತಿ ನೀಡಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ನಗರದ ಸಿ. ಗೋಪಾಲ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ವಕೀಲರು ಮಾಹಿತಿ ನೀಡಿದರು.
ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ‘ಆನ್‌ಲೈನ್ ಬೆಟ್ಟಿಂಗ್‌ಗೆ ಜುಲೈ 2ರಂದು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಅದನ್ನು ಡಿ.10ರಂದು ಹಿಂಪಡೆಯಲಾಗಿದೆ’ ಎಂದು ತಿಳಿಸಿತು. ‘ಅನುಮತಿ ವಾಪಸ್ ಪಡೆದಿರುವ ಕಾರಣ ಸರ್ಕಾರ ಮತ್ತೆ ಈ ಕುರಿತು ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ’ ಎಂದು ನ್ಯಾಯಾಲಯ ಆದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.