ADVERTISEMENT

ಬೆಂಗಳೂರಿನಲ್ಲಿ ಇಬ್ಬರ ಸಾವು: ಡೆಂಗಿ ಶಂಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 20:31 IST
Last Updated 28 ಜೂನ್ 2024, 20:31 IST
<div class="paragraphs"><p> ಸಾವು (ಸಾಂದರ್ಭಿಕ ಚಿತ್ರ)</p></div>

ಸಾವು (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಬಿಬಿಎಂಪಿ ಪೂರ್ವ ವಲಯದ ವ್ಯಾಪ್ತಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಡೆಂಗಿ ಶಂಕೆ ವ್ಯಕ್ತವಾಗಿದೆ.

80 ವರ್ಷದ ವೃದ್ಧೆ ಹಾಗೂ 27 ವರ್ಷದ ಯುವಕ ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಸಾವಿಗೆ ನಿಖರವಾದ ಕಾರಣ ತಿಳಿಯಲು ಶನಿವಾರ ಡೆತ್‌ ಆಡಿಟ್ ನಡೆಸಲಾಗುವುದು. ಡೆತ್ ಆಡಿಟ್ ವರದಿಯನ್ನು ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಲ್ಲಿಸಲಾಗುವುದು’ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.

ನಗರದಲ್ಲಿ ದಿನದಿಂದ ದಿನಕ್ಕೆ ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ 2,457 ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.