ADVERTISEMENT

ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆ: ದ್ವಿಚಕ್ರ ವಾಹನ ಸಂಚಾರ ನಿರ್ಬಂಧಕ್ಕೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 19:46 IST
Last Updated 28 ನವೆಂಬರ್ 2022, 19:46 IST
   

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆದಿದ್ದು, ಬಿಇಟಿಪಿಎಲ್ ಕಂಪನಿಗೆ ಸಂಚಾರ ಪೊಲೀಸರು ಪತ್ರ ಬರೆದಿದ್ದಾರೆ.

‘ನಗರದಿಂದ ಹೊಸೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿರುವ ಮೇಲ್ಸೇತುವೆಯಲ್ಲಿ ದಿನದಿಂದ ದಿನಕ್ಕೆ ಅಪಘಾತ ಗಳು ಹೆಚ್ಚುತ್ತಿವೆ. ದ್ವಿಚಕ್ರ ವಾಹನಗಳ ಸವಾರರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಇದೇ ಕಾರಣಕ್ಕೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸುವ ಬಗ್ಗೆ ಚರ್ಚಿಸಲಾಗುತ್ತಿದೆ’ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಬೆಂಗಳೂರು ಎಲಿವೇಟೆಡ್ ಟೋಲ್ ಪ್ರೈವೇಟ್ ಲಿಮಿಟೆಡ್ (BETPL) ಕಂಪನಿಗೆ ಈಗಾಗಲೇ ಪತ್ರ ಬರೆಯ ಲಾಗಿದೆ. ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಇರುವ ಅವಕಾಶ ಹಾಗೂ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಕಂಪನಿ ಅಧಿಕಾರಿಗಳ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.