ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಹ್ಯಾಂಡಲ್ ಲಾಕ್ ಕತ್ತರಿಸಿ ಕಳವು ಮಾಡುತ್ತಿದ್ದ ಆರೋಪಿ, ಜೆ.ಪಿ.ನಗರ ನಿವಾಸಿ ರಘುನಂದನ್ (23) ಎಂಬವನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈತನಿಂದ ₹1.25 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಈತ ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದ ಎಂದು ಪೊಲೀಸರು ಹೇಳಿದರು.
ಕದ್ದ ವಾಹನಗಳನ್ನು ಕಡಿಮೆ ಮೊತ್ತಕ್ಕೆ ಗ್ರಾಮೀಣ ಭಾಗದಲ್ಲಿ ಮಾರುತ್ತಿದ್ದ. ಈತನ ಬಂಧನದಿಂದ ಬನಶಂಕರಿ, ಜೆ.ಪಿ.ನಗರ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣ ಪತ್ತೆ ಆಗಿವೆ ಎಂದು ತಿಳಿಸಿದರು. ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.