ಬೆಂಗಳೂರು: ಮೊಬೈಲ್ಅಗ್ರಿಗೇಟರ್ ಆ್ಯಪ್ ಬಳಸಿಕೊಂಡು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಆ್ಯಪ್ ಬಳಸಿಕೊಂಡು ನಗರದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಇದು ಕಾನೂನು ಬಾಹಿರವಾಗಿದ್ದು, ವಾಹನಗಳ ಮಾಲೀಕರು ಈ ರೀತಿಯ ಆ್ಯಪ್‌ಗಳಲ್ಲಿ ನೋಂದಣಿ ಮಾಡಿಕೊಳ್ಳಬಾರದು ಎಂದು ಹೇಳಿದೆ.
ರೆಂಟ್–ಎ–ಕ್ಯಾಬ್ ಪರವಾನಗಿ ಪಡೆದಿರುವ ಕಂಪನಿಗಳು ಖಾಸಗಿ ಮಾಲೀಕತ್ವದ ಕಾರುಗಳನ್ನು ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಬಾಡಿಗೆ ನೀಡುತ್ತಿರುವುದೂ ಕಂಡು ಬಂದಿದೆ. ಇಂತಹ ವಾಹನಗಳ ವಿರುದ್ಧವೂ ಇಲಾಖೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ಬಾಡಿಗೆಗೆ ನೀಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.