ಬೆಂಗಳೂರು: ಮಹದೇವಪುರ ವಲಯದಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಆಪ್ಟಿಕ್ ಫೈಬರ್ ಕೇಬಲ್‌ಗಳನ್ನು (ಒಎಫ್‌ಸಿ) ಶನಿವಾರ ತೆರವುಗೊಳಿಸಲಾಯಿತು.
ಮಹದೇವಪುರ ವಲಯ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಪಾದಚಾರಿ ಮಾರ್ಗ, ವಿದ್ಯುತ್ ಕಂಬಗಳ ಮೇಲೆ ನೇತಾಡುತ್ತಿದ್ದ ಹಾಗೂ ಮರಗಳಿಗೆ ಸುತ್ತಿದ್ದ ಒಟ್ಟು 32.40 ಕಿ.ಮೀ. ಉದ್ದದ ಕೇಬಲ್‌ಗಳನ್ನು ಬಿಬಿಎಂಪಿ ಅಧಿಕಾರಿಗಳ ನೇತೃತ್ವದಲ್ಲಿ ತೆಗೆದು ಹಾಕಲಾಯಿತು.
‘ಕೇಬಲ್‌ಗಳನ್ನು ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತೆರವುಗೊಳಿಸಲಾಗಿದೆ. ಯಾವುದೇ ಸಂಸ್ಥೆ ಅನಧಿಕೃತವಾಗಿ ಇಂತಹ ಕೇಬಲ್‌ಗಳನ್ನು ಅಳವಡಿಸಿದರೆ ಅವುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಲಿದ್ದೇವೆ. ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕ್ರಮವನ್ನೂ ಜರುಗಿಸುತ್ತೇವೆ’ ಎಂದು ಮಹದೇವಪುರ ವಲಯದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಆರ್.ಎಲ್.ಪರಮೇಶ್ವರಯ್ಯ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.