ADVERTISEMENT

ಬೆಂಗಳೂರು | ‘ಉತ್ಪನ್ನಗಳ ಸಂತೆ’ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 14:43 IST
Last Updated 22 ಜೂನ್ 2024, 14:43 IST
ಜಿಕೆವಿಕೆ ಆವರಣದಲ್ಲಿ ಶನಿವಾರ ನಡೆದ ಉತ್ಪನ್ನಗಳ ಸಂತೆಯಲ್ಲಿ ತರಕಾರಿ ಸೆಲ್ಫಿ ಪಾಯಿಂಟ್‌ನಲ್ಲಿ ಯುವತಿಯರು ಫೋಟೊ ತೆಗೆಸಿಕೊಂಡರು –ಪ್ರಜಾವಾಣಿ ಚಿತ್ರ
ಜಿಕೆವಿಕೆ ಆವರಣದಲ್ಲಿ ಶನಿವಾರ ನಡೆದ ಉತ್ಪನ್ನಗಳ ಸಂತೆಯಲ್ಲಿ ತರಕಾರಿ ಸೆಲ್ಫಿ ಪಾಯಿಂಟ್‌ನಲ್ಲಿ ಯುವತಿಯರು ಫೋಟೊ ತೆಗೆಸಿಕೊಂಡರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ನಗರದ ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ ‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಉತ್ಪನ್ನಗಳ ಸಂತೆ’ಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಶನಿವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಚಲುವರಾಯಸ್ವಾಮಿ, ‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ, ವಿಸ್ತರಣೆ ಕೇಂದ್ರಗಳಲ್ಲಿ ಉತ್ಪಾದಿಸಿದ ಕೃಷಿ ಉತ್ಪನ್ನಗಳು, ಕೃಷಿಗೆ ಸಂಬಂಧಿಸಿದ ತಂತ್ರಜ್ಞಾನ ರೈತರಿಗೆ ಪರಿಚಯಿಸಲು ಈ ಸಂತೆ ವೇದಿಕೆಯಾಗಿದೆ’ ಎಂದು ಹೇಳಿದರು. 

ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ‘ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಇದುವರೆಗೆ 485 ತಂತ್ರಜ್ಞಾನಗಳು, 328 ತಳಿಗಳನ್ನು ಅಭಿವೃದ್ಧಿಪಡಿಸಿದೆ. ರಾಜ್ಯದ ಒಟ್ಟಾರೆ ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಇದು ನಿರ್ಣಾಯಕ ಪಾತ್ರ ವಹಿಸಿದೆ. ಆಧುನಿಕ ಉಪಕರಣಗಳು ಹಾಗೂ ಉತ್ಪನ್ನಗಳು ಏಕಗವಾಕ್ಷಿಯಡಿಯಲ್ಲಿ ತಲುಪಿಸಲು ಉತ್ಪನ್ನಗಳ ಸಂತೆ ಸಹಕಾರಿ ಆಗಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.