ADVERTISEMENT

ಉತ್ತರ ಕರ್ನಾಟಕ ಉತ್ಸವ 21ರಿಂದ

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 20:18 IST
Last Updated 11 ಜನವರಿ 2023, 20:18 IST
ಉತ್ತರ ಕರ್ನಾಟಕ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು
ಉತ್ತರ ಕರ್ನಾಟಕ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು   

ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯು ಇದೇ 21 ಮತ್ತು 22ರಂದು ‘ಉತ್ತರ ಕರ್ನಾಟಕ ಉತ್ಸವ–2023’ ಆಯೋಜಿಸಿದೆ.

ಉತ್ಸವವು ಅರಮನೆ ಮೈದಾನದ ಶೀಶ್ ಮಹಲ್ ಪ್ಯಾಲೇಸ್ ಗೇಟ್ ನಂಬರ್– 7ನಲ್ಲಿ ನಡೆಯಲಿದೆ. ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಿಡುಗಡೆ ಮಾಡಿದರು.

‘ಉತ್ತರ ಕರ್ನಾಟಕ ಭಾಗದವರು ವಿವಿಧ ಬಡಾವಣೆಗಳಲ್ಲಿ ಸಂಘಗಳನ್ನು ಸ್ಥಾಪಿಸಿದ್ದಾರೆ. ಇವು ಒಟ್ಟಾಗಿ ಮಹಾ ಸಂಸ್ಥೆ ಸ್ಥಾಪಿಸಿದ್ದು, ಸಂಘಟಿತರಾಗಿದ್ದಾರೆ’ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ತಿಳಿಸಿದ್ದಾರೆ.

ADVERTISEMENT

ಉತ್ತರ ಕರ್ನಾಟಕದ ಸಂಸ್ಕೃತಿ ಪರಂಪರೆ, ಉಡುಗೆ, ಆಹಾರ ಪದ್ಧತಿ ಅನಾವರಣಗೊಳಿಸಲಾಗುವುದು. ಉತ್ತರ ಕರ್ನಾಟಕ ಭಾಗದವರು ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ 3.24 ಗುಂಟೆ ಜಮೀನು ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.