ADVERTISEMENT

ವಾಲ್ಮೀಕಿ ನಿಗಮ ಹಗರಣ | ದದ್ದಲ್‌, ಶರಣ‍ಪ್ರಕಾಶ ರಾಜೀನಾಮೆಗೆ ರವಿಕುಮಾರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 15:56 IST
Last Updated 8 ಜೂನ್ 2024, 15:56 IST
<div class="paragraphs"><p>ಎನ್‌.ರವಿಕುಮಾರ್‌</p></div>

ಎನ್‌.ರವಿಕುಮಾರ್‌

   

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಹಗರಣದಲ್ಲಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರ ರಾಜೀನಾಮೆ ಪಡೆಯಬೇಕು’ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌. ರವಿಕುಮಾರ್ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ನಾಶಕ್ಕೆ ನಿಗಮದ ಅಧ್ಯಕ್ಷರು ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲೇ ಸಭೆ ನಡೆಸಿದ್ದರು ಎಂದು ಪ್ರಕರಣದ ಆರೋಪಿ ಪರಶುರಾಮ್‌ ದುರ್ಗಣ್ಣನವರ್ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಸಚಿವರಾಗಿದ್ದ ಬಿ. ನಾಗೇಂದ್ರ ಇದೇ ಹಗರಣದಲ್ಲಿ ಶಾಮೀಲಾಗಿರುವ ಆರೋಪದಡಿ ರಾಜೀನಾಮೆ ನೀಡಿದ್ದಾರೆ. ಬಸನಗೌಡ ದದ್ದಲ್‌ ಮತ್ತು ಶರಣಪ್ರಕಾಶ ಪಾಟೀಲರಿಂದಲೂ ರಾಜೀನಾಮೆ ಪಡೆಯಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದದ್ದಲ್‌ ಮತ್ತು ಶರಣ ‍ಪ್ರಕಾಶ ಅವರನ್ನು ರಕ್ಷಿಸುತ್ತಿದ್ದಾರೆ. ಮುಖ್ಯಮಂತ್ರಿಯವರು ಈಗ ಭ್ರಷ್ಟರ ರಕ್ಷಣಾ ಖಾತೆಯ ಸಚಿವರಂತೆ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇಕಡ 40ರಷ್ಟು ಲಂಚದ ಆರೋಪ ಮಾಡುತ್ತಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈಗ ಏನು ಹೇಳುತ್ತಾರೆ’ ಎಂದು ಕೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಒಂದು ಸಂಘಟಿತ ಅಪರಾಧ ಕೃತ್ಯ. ಕಾಂಗ್ರೆಸ್‌ ನಾಯಕರು ಸಂಚು ನಡೆಸಿ ತೆಲಂಗಾಣಕ್ಕೆ ಹಣ ರವಾನಿಸಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆದರೆ ಎಲ್ಲವೂ ಬಯಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.