ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಅಂಗಳ ಪರಮೇಶ್ವರಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೊಳಿಸುವ ₹2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಈ ರಸ್ತೆಯು ಕೊಡಿಗೇಹಳ್ಳಿ ಮುಖ್ಯರಸ್ತೆಯಿಂದ ಮುನೇಶ್ವರ ಲೇಔಟ್, ಕಣ್ಣೂರಮ್ಮ ಬಡಾವಣೆ, ಭದ್ರಪ್ಪ ಬಡಾವಣೆ, ದೇವಿನಗರ ಸುತ್ತಮುತ್ತಲ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿದ್ದು, ಕಳೆದ ಬಾರಿ ಸುರಿದ ಭಾರಿ ಮಳೆಯಿಂದ ರಸ್ತೆಯು ಹಾಳಾಗಿತ್ತು. ಪರಿಶೀಲನೆ ನಡೆಸಿ, ನೀರು ನಿಲ್ಲುತ್ತಿದ್ದ ಸ್ಥಳಗಳನ್ನು ಗುರುತಿಸಿ, ಮತ್ತೆ ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ಈ ಭಾಗದ ಹಲವು ಬಡಾವಣೆಗಳ ನಿವಾಸಿಗಳಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.
ಪಾಲಿಕೆ ಮಾಜಿ ಸದಸ್ಯ ಕೆ.ಎಂ.ಚೇತನ್, ಕಾಂಗ್ರೆಸ್ ಮುಖಂಡರಾದ ವೆಂಕಟಸ್ವಾಮಿ, ಹನುಮಂತಿ, ಎಂ.ಮುರಳಿ, ಶಾಂತಮ್ಮ, ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಗುದ್ದಲಿ ಪೂಜೆ: ಇದಕ್ಕೂ ಮುನ್ನ ಅಮೃತ ನಗರೋತ್ಥಾನ ಯೋಜನೆ ಯಡಿ ಥಣಿಸಂದ್ರ ವಾರ್ಡ್ ವ್ಯಾಪ್ತಿಯ ಹೆಗಡೆ ನಗರದ ಅಡ್ಡರಸ್ತೆಗಳನ್ನು ಅಭಿವೃದ್ಧಿಗೊಳಿಸುವ ₹2 ಕೋಟಿ ವೆಚ್ಚದ ಕಾಮಗಾರಿಗೆ ಕೃಷ್ಣ ಬೈರೇಗೌಡ ಗುದ್ದಲಿಪೂಜೆ ನೆರವೇರಿಸಿದರು
ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಪಳನಿ ವೆಂಕಟೇಶ್, ಬಸವರಾಜು, ಶುಕೂರ್ ಅಹಮದ್, ಎನ್.ಎಸ್.ದಿಲೀಪ್ ಕುಮಾರ್, ಟಿ.ಎನ್.ಮಹೇಶ್ ಕುಮಾರ್, ಬಿಬಿಎಂಪಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ನಾಗಪ್ಪ, ಸಹಾಯಕ ಎಂಜಿನಿಯರ್ ಸುರೇಶ್ ದೇವತ್ ರಾಜ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.