ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಜ.3ರಿಂದ ಹೆಚ್ಚುವರಿಯಾಗಿ ಐದು ಮಾರ್ಗಗಳಲ್ಲಿ ‘ವಜ್ರ’ ಹವಾನಿಯಂತ್ರಿತ ಬಸ್‌ಗಳ ಸೇವೆಯನ್ನು ಬಿಎಂಟಿಸಿ ಆರಂಭಿಸಲಿದೆ.
ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್, ಕೆಂಪೇಗೌಡ ಬಸ್ ನಿಲ್ದಾಣದಿಂದ ಜನಪ್ರಿಯ ಟೌನ್‌ಶಿಪ್, ಕಾವೇರಿ ಭವನದಿಂದ ಡಿ.ಕ್ರಾಸ್‌ಗೆ (ದೊಡ್ಡಬಳ್ಳಾಪುರ), ಕೆಂಪೇಗೌಡ ಬಸ್ ನಿಲ್ದಾಣದಿಂದ ವೈಟ್‌ಫೀಲ್ಡ್ ಟಿಟಿಎಂಸಿ, ಹೆಬ್ಬಾಳದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಮಾರ್ಗಗಳಲ್ಲಿ ಈ ಸೇವೆ ಆರಂಭಿಸಲಾಗುವುದು ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿ ಬಸ್ ನಿಲ್ದಾಣದವರೆಗೆ ಮತ್ತು ಬನಶಂಕರಿ ಟಿಟಿಎಂಸಿಯಿಂದ ಐಟಿಪಿಎಲ್‌ವರೆಗೆ ಹವಾನಿಯಂತ್ರಿತ ಸಾರಿಗೆ ಸೇವೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.