ಬೆಂಗಳೂರು: ನಗರದ ಹಲವು ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳ ಎದುರು ಹಾಗೂ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ವಿವಿಧ ಮಾದರಿಯ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿ, ಬಾಣಸವಾಡಿ, ಸೋಲದೇವನಹಳ್ಳಿ, ಆರ್.ಟಿ.ನಗರ, ಬಾಗಲಗುಂಟೆ, ಚಿಕ್ಕಜಾಲ, ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಳ್ಳತನ ಮಾಡಿದ್ದ ₹60 ಲಕ್ಷ ಮೌಲ್ಯದ ವಿವಿಧ ಮಾದರಿಯ 62 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಒಟ್ಟು ಏಳು ಠಾಣೆಗಳ ಪೊಲೀಸರು, ಒಟ್ಟು 32 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.