ADVERTISEMENT

ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ: ಸಚಿವ ಜಿ.ಪರಮೇಶ್ವರ ಭರವಸೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 15:35 IST
Last Updated 6 ಮಾರ್ಚ್ 2024, 15:35 IST
<div class="paragraphs"><p>ನಗರ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಬುಧವಾರ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದವರು. </p></div>

ನಗರ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಬುಧವಾರ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದವರು.

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ‘ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ‘ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ADVERTISEMENT

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪರಿಹಾರ ಸಂಸ್ಥೆ ಸಹಯೋಗದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದೇನೆ. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೇ ಸಮಸ್ಯೆಗಳನ್ನು ಆಲಿಸಬೇಕು. ಯಾವುದೇ ದೂರುಗಳ ಬಗ್ಗೆ ತಾತ್ಸರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ‘ ಎಂದು ಹೇಳಿದರು.

‘ಆ್ಯಸಿಡ್ ಮಾರಾಟ ನಿಷೇಧ ಮಾಡಲಾಗುವುದು. ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು’ ಎಂದು ತಿಳಿಸಿದರು.

‘ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಆ ರೀತಿ ಬದಲಾವಣೆ ತರಲಾಗಿದೆ. ಬೆಂಗಳೂರು ನಗರದಲ್ಲಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ‘ ಎಂದರು.

‘ನಗರದಲ್ಲಿ ಹೊಸದಾಗಿ 6 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ 8ರಷ್ಟು ಮಹಿಳೆಯರಿದ್ದಾರೆ. ಶೇ 25ರಷ್ಟಾಗಬೇಕು ಎಂಬುದು ಗುರಿ‘ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಕಮಿಷನರ್‌ ಬಿ.ದಯಾನಂದ್, ನಿಮ್ಹಾನ್ಸ್‌ನ ಡೀನ್ ಪ್ರಭಾಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಉಪಸ್ಥಿತರಿದ್ದರು.

ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಬಹುದು.
-ಜಿ.ಪರಮೇಶ್ವರ, ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.