ADVERTISEMENT

‘ಬೆಂಗಳೂರು ಹಬ್ಬ’, ಹಂಪಿ ಉತ್ಸವ ಇನ್ನು ರಾಷ್ಟ್ರೀಯ ಉತ್ಸವ: ಚಿಂತನೆ

ಮೈಸೂರು ದಸರಾ, ಹಂಪಿ ಉತ್ಸವಕ್ಕೂ ಇದೇ ಗೌರವ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 19:31 IST
Last Updated 6 ಮಾರ್ಚ್ 2020, 19:31 IST
   

ಬೆಂಗಳೂರು: ಮೈಸೂರು ದಸರಾ ದಂತೆಯೇ, ಹಂಪಿ ಉತ್ಸವ ಮತ್ತು ‘ಬೆಂಗಳೂರು ಹಬ್ಬ’ವನ್ನು ರಾಷ್ಟ್ರೀಯ ಉತ್ಸವವಾಗಿ ಪ್ರತಿವರ್ಷ ನಿಗದಿತ ದಿನಾಂಕದಲ್ಲಿ ಆಚರಿಸುವ ಚಿಂತನೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಅಲ್ಲಂ ವೀರಭದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇದು ಅನಿವಾರ್ಯ, ಹಂಪಿ ಉತ್ಸವಕ್ಕೆ ಸರ್ಕಾರ ಈ ವರ್ಷ ₹ 5 ಕೋಟಿ ನೀಡಿತ್ತು. ಯಾವುದೇ ಉತ್ಸವವನ್ನು ಸರ್ಕಾರ ಕಡೆಗಣಿಸುವುದಿಲ್ಲ ಎಂದರು.

ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಲ್ಲಿ ₹ 1,290 ಕೋಟಿ ಮಂಜೂರು ಮಾಡಲಾಗಿದೆ. ರಾಜ್ಯದಲ್ಲಿ 319 ಪ್ರವಾಸಿತಾಣಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 41 ಕೇಂದ್ರೀಕೃತ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್‌ನ ಎಚ್‌.ಎಂ.ರಮೇಶ್‌ ಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.