ಬೆಂಗಳೂರು: ರಾಜ್ಯದಲ್ಲಿ ಖಾಸಗಿಯವರು, ಸಂಸ್ಥೆಗಳು ಸಮೀಕ್ಷೆ ಅಥವಾ ಇತರ ರೂಪದಲ್ಲಿ ಮತದಾರರ ಮಾಹಿತಿ ಸಂಗ್ರಹಿಸುತ್ತಿವೆಯೇ ಎಂದು ಪರಿಶೀಲಿಸುವಂತೆ ಎಲ್ಲ ಜಿಲ್ಲೆಗಳ ಹಾಗೂ ನಗರ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
‘ಕೆಲವು ಜಿಲ್ಲೆಗಳಲ್ಲಿ ಮನೆ, ಮನೆ ಸಮೀಕ್ಷೆ ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿ ಆಧರಿಸಿಆಯೋಗ ಈ ನಿರ್ದೇಶನ ನೀಡಿದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಶುಕ್ರವಾರ ತಿಳಿಸಿದ್ದಾರೆ.
‘ಜನರನ್ನು ದಾರಿ ತಪ್ಪಿಸುವ ರೀತಿಯಲ್ಲಿ ಗುರುತಿನ ಚೀಟಿ ಬಳಸಿಕೊಂಡು ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ. ಇಂತಹದಕ್ಕೆ ಜಿಲ್ಲಾ ಚುನಾವಣಾಧಿಕಾರಿ ಅಥವಾ ಮತದಾರರ ನೋಂದಣಿ ಅಧಿಕಾರಿಗಳು ಅನುಮತಿ ನೀಡುವುದನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.