ADVERTISEMENT

ವಕ್ಫ್ ಆಸ್ತಿ ವಿವಾದ: ಸಂಸತ್ ಸಮಿತಿ ಮುಖ್ಯಸ್ಥರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 6:38 IST
Last Updated 30 ಅಕ್ಟೋಬರ್ 2024, 6:38 IST
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ   

ಬೆಂಗಳೂರು: ವಿಜಯಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ರೈತರ ಜಮೀನನ್ನು ವಕ್ಫ್‌ ಆಸ್ತಿಗೆ ಸೇರಿಸಲು ಬಂದಿರುವ ನೋಟೀಸ್‌ಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಅವರು ವಕ್ಫ್ ತಿದ್ದುಪಡಿ ವಿಧೇಯಕದ ಜಂಟಿ ಸದನ ಸಮಿತಿ ಮುಖ್ಯಸ್ಥ ಜಗದಾಂಬಿಕಾ ಪಾಲ್‌ ಅವರಿಗೆ ಪತ್ರ ಬರೆದಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ  ಮಾಹಿತಿ ಹಂಚಿಕೊಂಡಿರುವ ಅವರು, ‘ವಿಜಯಪುರ & ಕರ್ನಾಟಕದ ಇತರ ಜಿಲ್ಲೆಗಳ ರೈತರ ಜಮೀನನ್ನು ವಕ್ಫ್ ಆಸ್ತಿಯನ್ನಾಗಿ ಘೋಷಿಸುವ ಕುರಿತು ಬಂದಿರುವ ನೋಟಿಸ್‌ಗಳ ಕುರಿತು, ಜಗದಾಂಬಿಕಾ ಅವರಿಗೆ ಪತ್ರ ಬರೆದಿದ್ದೇನೆ. ನೋಟಿಸ್‌ಗಳ ಹೊರತಾಗಿಯೂ ಹಲವರ ಆರ್ ಟಿ ಸಿ, ಪಹಣಿ ಗಳಲ್ಲಿಯೂ ಯಾವುದೇ ಸಮರ್ಪಕ ಕಾನೂನುಗಳನ್ನು ಪಾಲಿಸದೇ ವಕ್ಫ್ ಆಸ್ತಿಗಳೆಂದು ತಿದ್ದುಪಡಿ ಮಾಡಲಾಗಿದ್ದು, ಈ ರೀತಿ ತೊಂದರೆಗೆ ಒಳಗಾಗಿರುವ ರೈತರ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸುಬೇಕು. ಇದರಿಂದ ವಕ್ಫ್‌ನಿಂದ ಆಗಿರುವ ಭೂಮಿ ಅತಿಕ್ರಮಣದ ನೇರ ಮಾಹಿತಿ ದೊರಕಲಿದೆ’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT