ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮ ಅ.25ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ಆಯೋಜಿಸಲಾಗಿದೆ.
ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು. ದೂರವಾಣಿ ಸಂಖ್ಯೆ: 080-22945119 ಮತ್ತು 080-22229639 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.