ADVERTISEMENT

ಬೆಂಗಳೂರು: ಅಕ್ಟೋಬರ್‌ 23 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 15:19 IST
Last Updated 20 ಅಕ್ಟೋಬರ್ 2024, 15:19 IST
   

ಬೆಂಗಳೂರು: ಕಾವೇರಿ 5ನೇ ಹಂತದ ಯೋಜನೆಯ ಚಾಲನೆ ನಂತರದ ವಿದ್ಯುತ್ ಸಂಬಂಧಿತ ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು‌ ಅ.23 ರಂದು ಸ್ಥಗಿತಗೊಳಿಸಲಾಗುತ್ತಿದೆ.

ಈ ಕಾರಣದಿಂದ ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ಕಾವೇರಿ‌ಯ ಎಲ್ಲಾ ಹಂತಗಳಿಂದ ನೀರು ಸರಬರಾಜನ್ನು ನಿಲ್ಲಿಸಲಾಗುತ್ತಿದೆ. ಈ ಅವಧಿಯಲ್ಲಿ ನಗರದಾದ್ಯಂತ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT