ಬೆಂಗಳೂರು: ಹೆಣ್ಣೂರಿನ ಥಣಿಸಂದ್ರದಲ್ಲಿ ನೀರಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಹೆಬ್ಬಾಳದ ಮಾನ್ಯತಾ ಟೆಕ್ಪಾರ್ಕ್ನಲ್ಲಿ ನೆಲೆಸಿದ್ದ ವಿದ್ಯಾರ್ಥಿ ಇಶಾನ್(23) ಮೃತಪಟ್ಟವರು.
ಹೆಣ್ಣೂರು ಬಳಿ ಇಶಾನ್ ನಡೆದುಕೊಂಡು ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕ ವಾಹನ ನಿಲುಗಡೆ ಮಾಡದೇ ಪರಾರಿಯಾಗಲು ಯತ್ನಿಸಿದ್ದ. ಬಳಿಕ, ಸ್ಥಳೀಯರು ಹಿಂಬಾಲಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ಧಾರೆ. ಇಶಾನ್ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಆಗಿದ್ದರು. ಸ್ನೇಹಿತನನ್ನು ಭೇಟಿಯಾಗಲು ಥಣಿಸಂದ್ರ ಬಳಿ ಬಂದಿದ್ದರು. ಆಗ ಘಟನೆ ನಡೆದಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.