ADVERTISEMENT

Karnataka Rains: 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 15:42 IST
Last Updated 23 ಜೂನ್ 2024, 15:42 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸೋಮವಾರವೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು, 10 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಆರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ADVERTISEMENT

ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಕೆಲವೆಡೆ ಗಂಟೆಗೆ 40 ಕಿ.ಮೀ ನಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಕರಾವಳಿಯ ಉದ್ದಕ್ಕೂ ತೀವ್ರ ಬಿರುಗಾಳಿಯ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು. ಸಮುದ್ರದಲ್ಲಿ ಕಾರ್ಯಾಚರಣೆ ಹಾಗೂ ಸಮುದ್ರದ ದಡದಲ್ಲಿ ಮನರಂಜನಾ ಚಟುವಟಿಕೆಗಳನ್ನು ನಡೆಸುವಾಗ ಜಾಗರೂಕವಾಗಿರಬೇಕು ಎಂದು ಇಲಾಖೆ ಹೇಳಿದೆ.

ಮಂಗಳವಾರವೂ ರಾಜ್ಯದ 14 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ, ಏಳು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.