ಬೆಂಗಳೂರು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ಕಿ.ಮೀ.ಯಿಂದ 40 ಕಿ.ಮೀ. ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಮುಂದಿನ ಮೂರು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.