ಬೆಂಗಳೂರು: ದೊಡ್ಡನೆಕ್ಕುಂದಿ ಮುಖ್ಯರಸ್ತೆಯ ಶ್ರೀರಾಮ ದೇವಸ್ಥಾನದ ಬಳಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿರುವ ಕಾರಣ ಅಕ್ಟೋಬರ್ 2ರಿಂದ ಮೂರು ತಿಂಗಳು ಈ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ದೊಡ್ಡನೆಕ್ಕುಂದಿ ಜಂಕ್ಷನ್ ಕಡೆಯಿಂದ ಹೊರ ವರ್ತುಲ ರಸ್ತೆ ಕಡೆಗೆ ಶ್ರೀರಾಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
*ಹೊರ ವರ್ತುಲ ರಸ್ತೆ ಕಡೆಯಿಂದ ದೊಡ್ಡನೆಕ್ಕುಂದಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನಿಸರ್ಗ ಬಡಾವಣೆ ಮುಖ್ಯ ರಸ್ತೆ ಮೂಲಕ ದೊಡ್ಡನೆಕ್ಕುಂದಿ ಅಂಚೆ ಕಚೇರಿ ರಸ್ತೆ, ಅಂಬೇಡ್ಕರ್ ಕಾಲೊನಿ ಮುಖ್ಯ ರಸ್ತೆ ಮಾರ್ಗವಾಗಿ ಸಾಗಬೇಕು.
* ದೊಡ್ಡನೆಕ್ಕುಂದಿ ಜಂಕ್ಷನ್ ಕಡೆಯಿಂದ ಹೊರ ವರ್ತುಲ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಅಂಬೇಡ್ಕರ್ ಕಾಲೊನಿ ಮುಖ್ಯ ರಸ್ತೆ ಮೂಲಕ ದೊಡ್ಡನೆಕ್ಕುಂದಿ ಅಂಚೆ ಕಚೇರಿ ರಸ್ತೆ, ನಿಸರ್ಗ ಬಡಾವಣೆ ಮುಖ್ಯ ರಸ್ತೆ ಮಾರ್ಗವಾಗಿ ಹೋಗಬೇಕು. ಈ ಎರಡೂ ಮಾರ್ಗದಲ್ಲಿ ಭಾರಿ ವಾಹನಗಳು ಮತ್ತು ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.