ADVERTISEMENT

ವೈಟ್‌ಫೀಲ್ಡ್‌: ಅಪಘಾತ ಪ್ರಕರಣ– ಮಿನಿಬಸ್ ಚಾಲಕನಿಗೆ ಜೈಲು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 15:57 IST
Last Updated 18 ನವೆಂಬರ್ 2024, 15:57 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಮಿನಿ ಬಸ್‌ ಚಾಲಕ ಸುನಿಲ್‌ಕುಮಾರ್‌(37) ಎಂಬಾತನಿಗೆ ನ್ಯಾಯಾಲಯ ಒಂದು ವರ್ಷ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ ₹9 ಸಾವಿರ ದಂಡ ವಿಧಿಸಿ, ಆದೇಶಿಸಿದೆ.

ADVERTISEMENT

ಅಪರಾಧಿ ದಂಡದ ಮೊತ್ತ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಎರಡು ತಿಂಗಳು, 10 ದಿನ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಅತಿವೇಗದಿಂದ ಅಪಘಾತ: 2021ರ ಸೆಪ್ಟೆಂಬರ್ 14ರಂದು ವೈಟ್‌ಫೀಲ್ಡ್ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ವರ್ತೂರಿನ ಗುಂಜೂರು ಮುಖ್ಯ ರಸ್ತೆಯಲ್ಲಿ ಮಿನಿ ಬಸ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿತ್ತು.

ಮಿನಿ ಬಸ್‌ ಚಾಲಕ, ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನವನ್ನು ಚಾಲನೆ ಮಾಡಿಕೊಂಡು ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆಸಿದ್ದ. ಸ್ಕೂಟರ್ ಸವಾರ ಎಂ.ಕಲ್ಯಾಣ್‌ ಕುಮಾರ್‌(25) ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೋಮಾ ಸ್ಥಿತಿಯಿಂದ ಹೊರಕ್ಕೆ ಬಂದಿರಲಿಲ್ಲ. ಕಲ್ಯಾಣ್‌ ಕುಮಾರ್‌ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮನೆಗೆ ಕರೆದೊಯ್ಯಲಾಗಿತ್ತು. ಮನೆಯಲ್ಲಿ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಚಿಕಿತ್ಸೆಗೆ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2021ರ ಡಿಸೆಂಬರ್‌ 10ರಂದು ಸ್ಕೂಟರ್ ಸವಾರ ಮೃತಪಟ್ಟಿದ್ದರು ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.