ADVERTISEMENT

ಹಣವಿಲ್ಲದೆ, ಬ್ರ್ಯಾಂಡ್ ಬೆಂಗಳೂರು ಪ್ರಯೋಜನವಿಲ್ಲ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 16:08 IST
Last Updated 16 ಅಕ್ಟೋಬರ್ 2024, 16:08 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ರಾಜಕಾಲುವೆ ಸ್ವಚ್ಛ ಮಾಡಲು ಬಿಬಿಎಂಪಿಗೆ ಹಣ ನೀಡದೆ ‘ಬ್ರ್ಯಾಂಡ್‌ ಬೆಂಗಳೂರು’ ಎಂದರೆ ಪ್ರಯೋಜನವಿಲ್ಲ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಬುಧವಾರ ಇಲ್ಲಿ ಅಭಿಪ್ರಾಯಪಟ್ಟರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಗರದಲ್ಲಿ ಮಳೆಯಿಂದ ಹಾನಿ ಕುರಿತ ಅನೇಕ ವರದಿಗಳಿವೆ. ನಾನು ಸಿ.ಎಂ ಆಗಿದ್ದಾಗ ₹800 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಸುಧಾರಣೆ ಕಾಮಗಾರಿ ಆರಂಭಿಸಲಾಗಿತ್ತು. ಈಗಿನ ಸರ್ಕಾರ ಕೆಲಸ ಆ ಕೆಲಸ ಮಾಡುತ್ತಿಲ್ಲ’ ಎಂದರು.

‘ಮಳೆ ಪ್ರಾರಂಭವಾಗುವ ಮುನ್ನವೇ ಸ್ವಚ್ಛತಾ ಕೆಲಸ ಆಗಬೇಕು. ತಗ್ಗು ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾಲುವೆ ನಿರ್ಮಿಸಬೇಕು. ಕೆರೆ ಪ್ರದೇಶದಲ್ಲಿನ ಮನೆಗಳನ್ನು ತೆರವುಗೊಳಿಸಬೇಕು’ ಎಂದರು.

ADVERTISEMENT

‘ಬಿಬಿಎಂಪಿ ತೆರಿಗೆ ವರಮಾನದಿಂದ ಸಣ್ಣಪುಟ್ಟ ದುರಸ್ತಿ ಮಾಡಿಸುತ್ತಿದೆ. ರಾಜಕಾಲುವೆ ದುರಸ್ತಿ, ರೈಲ್ವೆ ಕೆಳಸೇತುವೆ, ಮೇಲ್ಸೇತುವೆ ಯೋಜನೆಗಳಿಗೆ ಸರ್ಕಾರ ಹಣವನ್ನೂ ಕೊಡುತ್ತಿಲ್ಲ, ಕೆಲಸವನ್ನೂ ಮಾಡುತ್ತಿಲ್ಲ’ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.