ADVERTISEMENT

ಕೇಬಲ್ ಅಳವಡಿಕೆ ವೇಳೆ ಗ್ಯಾಸ್ ಪೈಪ್‌ಲೈನ್ ಸ್ಫೋಟ: ಓರ್ವ ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 11:47 IST
Last Updated 14 ಜನವರಿ 2020, 11:47 IST
   

ಬೆಂಗಳೂರು: ಜಿಯೋ ಕಂಪನಿಯ ಕೇಬಲ್ ಅಳವಡಿಕೆ ವೇಳೆ ಗೇಲ್ ಪೈಪ್‌ಲೈನ್‌ನಿಂದ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ ಒಬ್ಬ ಮಹಿಳೆ ಗಾಯಗೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ರೋಡ್ ಬಳಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ಸಂಧ್ಯಾರಾಣಿ ಎಂಬವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ತೀವ್ರತೆಗೆ ಸ್ಲಾಬ್ ಗಳು ಮತ್ತು ಅಂಗಡಿಯಲ್ಲಿನ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿವೆ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.