ADVERTISEMENT

ಒಂದೇ ಸೂರಿನಡಿ ಕಾರ್ಮಿಕರಿಗೆ ಸವಲತ್ತು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 18:16 IST
Last Updated 8 ಫೆಬ್ರುವರಿ 2021, 18:16 IST
ಕೋವಿಡ್ ಸಂದರ್ಭದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಒಳಗೊಂಡ ‘ಶ್ರಮ ಮೇವ ಜಯತೆ’ ಕೈಪಿಡಿಯನ್ನು ಶಿವರಾಂ ಹೆಬ್ಬಾರ್ ಬಿಡುಗಡೆ ಮಾಡಿದರು. ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್. ಬಳ್ಳಾರಿ, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ,  ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ಖತ್ರಿ, ಬಾಯ್ಲರ್ ಇಲಾಖೆ ನಿರ್ದೇಶಕ ಕೆ.ಶ್ರೀನಿವಾಸ್ ಇದ್ದರು

ಬೆಂಗಳೂರು: ‘ಕಾರ್ಮಿಕರಿಗೆ ಸವಲತ್ತು ಒದಗಿಸುವ ಕಾರ್ಮಿಕ ಇಲಾಖೆಯ ವಿವಿಧ ವಿಭಾಗಗಳು ಒಂದೇ ಸೂರಿನಡಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸೂಚನೆ ನೀಡಿದರು.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಇಲಾಖೆಗೆ ಸಂಬಂಧಿಸಿದ ಕಚೇರಿಗಳು ಬೇರೆ ಬೇರೆ ಕಡೆ ಇರುವ ಕಾರಣ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂಬುದನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ಇದನ್ನು ನಿವಾರಿಸುವ ಮೂಲಕ ಇಲಾಖೆ ಕಾರ್ಯವೈಖರಿಗೆ ವೇಗ ನೀಡಬೇಕು. ಖಾಲಿ ಇರುವ ಹುದ್ದೆಗಳ ಭರ್ತಿಗೂ ಪ್ರಸ್ತಾವನೆ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆಯೋ ಇಲ್ಲವೋ ಎಂಬುದನ್ನು ಹಿರಿಯ ಅಧಿಕಾರಿಗಳೂ ಖುದ್ದು ಭೇಟಿ ನೀಡಿ ಪರಿಶೀಲಿಸಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ವರದಿ ಸಲ್ಲಿಸಬೇಕು’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.